ಚಿಕ್ಕಮಗಳೂರು:ಜಿಲ್ಲೆಯ ಕೊಪ್ಪ ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಕಾರ್ಫ್ ಮತ್ತು ಕೇಸರಿ ಶಾಲು ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಕಾಲೇಜಿನಲ್ಲಿ ಇಂದು ಕರೆಯಲಾಗಿದ್ದ ಪೋಷಕರ ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗಳಿಗೆ ಸ್ಕಾರ್ಫ್ ಧರಿಸುವಂತಿಲ್ಲ ಹಾಗೂ ತಲೆಯ ಮೇಲೆ ವೇಲ್ ಹಾಕಿಕೊಂಡು ಬರಬಹುದು ಎಂಬ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕೇಸರಿ ಶಾಲು ಮತ್ತು ಸ್ಕಾರ್ಫ್ ಮಧ್ಯೆ ನಡೆಯುತ್ತಿದ್ದ ಮುಸುಕಿನ ಗುದ್ದಾಟ ಅಂತ್ಯ ಕಂಡಿದೆ.
ಕಾಲೇಜಿನ ಸಭಾಂಗಣದಲ್ಲಿ ನಡೆದ ಪೋಷಕರ ಸಭೆಯಲ್ಲಿ ಪ್ರಾಂಶುಪಾಲ ಅನಂತ್.ಎಸ್ ಮಾತನಾಡಿ, 2018 ರಲ್ಲಿ ಇದೇ ರೀತಿ ವಿವಾದ ಉಂಟಾಗಿತ್ತು. ಆಗ ತಲೆಯ ಮೇಲೆ ವೇಲ್ ಹಾಕಿಕೊಳ್ಳಲು ಮಾತ್ರ ಅವಕಾಶ ಕೊಡಲಾಗಿತ್ತು. ಈ ಬಾರಿಯೂ ಎಲ್ಲರ ಅಭಿಪ್ರಾಯವನ್ನು ಪಡೆದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.