ಚಿಕ್ಕಮಗಳೂರು: ಅರಣ್ಯ ಇಲಾಖೆಯ ಸಿಬ್ಬಂದಿ ಪ್ರತಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ರೈತನೋರ್ವ ಅರಣ್ಯ ಇಲಾಖೆ ಮುಂಭಾಗದಲ್ಲಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ, ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ ನಡೆದಿದೆ.
ಅರಣ್ಯ ಇಲಾಖೆ ಮುಂಭಾಗದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ - ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ
ವಿಷ ಕುಡಿದ ರೈತ ಕಚೇರಿ ಎದುರು ನರಳಾಟ ನಡೆಸಿದ್ದಾನೆ. ಬಳಿಕ ಈತನನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ರೈತನ ಸ್ಥಿತಿ ಗಂಭೀರವಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ರೈತ
ವಿಷ ಕುಡಿದ ರೈತ ಕಚೇರಿ ಎದುರು ನರಳಾಟ ನಡೆಸಿದ್ದಾನೆ. ಬಳಿಕ ಈತನನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ರೈತನ ಸ್ಥಿತಿ ಗಂಭೀರವಾಗಿದೆ.
ರೈತನ ಮನೆಯಲ್ಲಿದ್ದ ಸಾಗುವಾನಿ ಮರಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ ಎಂದು ಹೇಳಲಾಗುತ್ತಿದ್ದು, ಸಾಗುವಳಿ ಮಾಡಲು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಅಡ್ಡಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.