ಕರ್ನಾಟಕ

karnataka

ETV Bharat / state

ಕಳಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ!

ನೆರೆಯಿಂದ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಮಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ.

ನೆರೆಯಿಂದ ಮನೆ ಆಸ್ತಿ-ಪಾಸ್ತಿ ಹಾನಿ: ಮನನೊಂದು ರೈತ ಆತ್ಮಹತ್ಯೆ

By

Published : Sep 14, 2019, 4:59 PM IST

ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ನೆರೆಯಿಂದ ಮನೆ ಹಾಗೂ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತನೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮನನೊಂದು ರೈತ ಆತ್ಮಹತ್ಯೆ

ರೈತ ಚನ್ನಪ್ಪಗೌಡ (65) ಆತ್ಮಹತ್ಯೆ ಮಾಡಿಕೊಂಡ ರೈತ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಕಾರ್ಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಚನ್ನಪ್ಪಗೌಡ ಐದು ಎಕರೆ ಜಮೀನು ಹೊಂದಿದ್ದು, ಮಳೆಯಿಂದ ಬೆಟ್ಟಗುಡ್ಡ ಕುಸಿದು ಬಹುತೇಕ ತೋಟ ಹಾಳಾಗಿ ಹೋಗಿತ್ತು. ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಸಹ ನಡೆಸಿದ್ದರು. ಸರ್ಕಾರದಿಂದಲೂ ಯಾವುದೇ ರೀತಿಯ ಪರಿಹಾರ ಬಂದಿಲ್ಲ ಎಂದು ಮನನೊಂದು ರೈತ ಗುಂಡು ಹಾರಿಸಿಕೊಂಡಿದ್ದಾನೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವೇ ನಿಜವಾದ ಕಾರಣ ಏನೆಂದು ತಿಳಿದು ಬರಬೇಕಿದೆ.

ABOUT THE AUTHOR

...view details