ಚಿಕ್ಕಮಗಳೂರು: ಅಡಿಕೆ ಬೆಳೆಗೆ ಮಿತಿ ಮೀರಿದ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಮನನೊಂದು ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ತೆಕ್ಕೂರು ಸಮೀಪದ ಕೊಡತಲು ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತರನ್ನು 35 ವರ್ಷದ ಅಭಿಲಾಷ್ ಎಂದು ಗುರುತಿಸಲಾಗಿದೆ. ಇವರು ಅಡಿಕೆ ತೋಟದ ನಿರ್ವಹಣೆಗೆಂದು ಶೃಂಗೇರಿ ಖಾಸಗಿ ಬ್ಯಾಂಕಿನಲ್ಲಿ 3.50 ಸಾವಿರ ರೂ ಹಾಗೂ ಕೈ ಸಾಲ ಮಾಡಿಕೊಂಡಿದ್ದರು. ಆದರೆ, ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ರೈತ ಕೂಡ ತೀವ್ರ ಕಂಗಾಲಾಗಿದ್ದರು.