ಕರ್ನಾಟಕ

karnataka

ETV Bharat / state

ಅಪ್ಪಂದಿರ ದಿನವೇ ದುರಂತ.. ಮರಕ್ಕೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವು

ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸಂಭವಿಸಿದೆ.

father-and-son-dead-in-car-accident-near-mudigere
ಮರಕ್ಕೆ ಕಾರು ಡಿಕ್ಕಿ: ಧರ್ಮಸ್ಥಳದಿಂದ ಬರುತ್ತಿದ್ದ ತಂದೆ, ಮಗ ಸ್ಥಳದಲ್ಲೇ ಸಾವು

By

Published : Jun 19, 2022, 7:48 PM IST

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಕಾರು ಗುದ್ದಿದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ನಡೆದಿದೆ.

ಬೆಂಗಳೂರಿನ ರಾಜಾಜಿನಗರದ ನಿವಾಸಿಗಳಾದ ನರಸಿಂಹರಾಜ್ (46) ಹಾಗೂ ಕಿರಣ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂ ಆಗಿದೆ. ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ABOUT THE AUTHOR

...view details