ಚಿಕ್ಕಮಗಳೂರು:ಕಸ್ತೂರಿ ರಂಗನ್ ವರದಿ ಹಾಗೂ ಹುಲಿ ಯೋಜನೆ ಖಂಡಿಸಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು-ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಗದ್ದಲ ಉಂಟಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವೇದಿಕೆ ಮುಂಭಾಗ ಗಲಾಟೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಲು ಮುಂದಾದಾಗ ಈ ಘಟನೆ ನಡೆದಿದೆ.