ಚಿಕ್ಕಮಗಳೂರು: ನಗರದಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ಸಾಮಾಜಿಕ ಅಂತರ ಕಾಪಾಡದ ಅಂಗಡಿ-ಮುಂಗಟ್ಟುಗಳು ಹಾಗೂ ಮಾಸ್ಕ್ ಧರಿಸದ ಜನಸಾಮಾನ್ಯರಿಗೆ ರಸ್ತೆಯಲ್ಲೇ ದಂಡ ಹಾಕುತ್ತಿದ್ದಾರೆ.
ಚಿಕ್ಕಮಗಳೂರಲ್ಲಿ ಕೊರೊನಾ ಕಟ್ಟೆಚ್ಚರ: ಮಾಸ್ಕ್ ಇಲ್ಲದೇ ಬೀದಿಗಿಳಿದವರಿಗೆ ದಂಡ - Officials fine to who not wear mask
ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿ ನೇತೃತ್ವದಲ್ಲಿ ನಗರದ ವಿವಿಧೆಡೆ ಸಂಚರಿಸಿ ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಿದರು. ಅಲ್ಲದೇ ಅಂತರ ಕಾಯ್ದುಕೊಂಡು ಅಂಗಡಿಗಳಲ್ಲಿ ವ್ಯವಹರಿಸುವಂತೆ ಸೂಚಿಸಿದರು.
Mask
ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿ ನೇತೃತ್ವದಲ್ಲಿ ನಗರದ ವಿವಿಧೆಡೆ ಸಂಚರಿಸಿ ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಿದರು. ಅಲ್ಲದೇ ಅಂತರ ಕಾಯ್ದುಕೊಂಡು ಅಂಗಡಿಗಳಲ್ಲಿ ವ್ಯವಹರಿಸುವಂತೆ ಸೂಚಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಪ್ರತಿದಿನ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆ ಅಧಿಕಾರಿಗಳು ಅಲರ್ಟ್ ಆಗಿ ಜನರನ್ನ ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಅಂಗಡಿ ಮಾಲೀಕರಿಗೆ ಅಂಗಡಿ ಮುಂದೆ ಬಾಕ್ಸ್ ಹಾಕುವಂತೆ ಸೂಚಿಸಿದ್ದಾರೆ. ಅಲ್ಲದೇ ಅಂಗಡಿಗಳಿಗೆ ಮಕ್ಕಳನ್ನ ಕರೆ ತಂದಿದ್ದ ಪೋಷಕರಿಗೂ ಬಿಸಿ ಮುಟ್ಟಿಸಿದ್ದಾರೆ.
Last Updated : Apr 26, 2021, 9:52 PM IST