ಚಿಕ್ಕಮಗಳೂರು:ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಹುಟ್ಟೂರಾದ ಸರಪನಹಳ್ಳಿಯ ತೋಟದ ಮನೆಯಲ್ಲಿ ಮಗ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಹುಟ್ಟೂರಲ್ಲಿ ಧರ್ಮೇಗೌಡರ ಅಂತ್ಯ ಸಂಸ್ಕಾರ: ಪುತ್ರನಿಂದ ತಂದೆಯ ಚಿತೆಗೆ ಅಗ್ನಿಸ್ಪರ್ಶ - SL darmegowda by son sonal gowda
ಸಖರಾಯಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಹುಟ್ಟೂರಾದ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಅಗ್ನಿಸ್ಪರ್ಶ
ಸಖರಾಯಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗಾಗಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅವರ ಹುಟ್ಟೂರಾದ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಪುತ್ರ ಸೋನಾಲ್ ಗೌಡ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.
ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯ ಸಂಸ್ಕಾರವನ್ನು ಮಾಡಲಾಗಿದ್ದು, ಈ ಕಾರ್ಯದಲ್ಲಿ ಅವರ ಕುಟುಂಬದ ಎಲ್ಲಾ ಸದಸ್ಯರು ಸೇರಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಹಲವರು ಗಣ್ಯರು ಭಾಗವಹಿಸಿದ್ದರು.