ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಕಡೂರಲ್ಲಿ ರಿಯಲ್ ಎಸ್ಟೇಟ್ ಡೀಲ್ ವೇಳೆ ಗುಂಡಿನ ದಾಳಿ: ಇಬ್ಬರಿಗೆ ಗಂಭೀರ ಗಾಯ - Kadur Taluk Banur Village
ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ ನಡೆದು, ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ನಡೆದಿದೆ.
ರಿಯಲ್ ಎಸ್ಟೇಟ್ ಡೀಲ್ ವೇಳೆ ಗುಂಡಿನ ದಾಳಿ..ಇಬ್ಬರಿಗೆ ಗಂಭೀರ ಗಾಯ
ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಭೂಮಿ ಖರೀದಿ ವಿಚಾರವಾಗಿ ಮಾತುಕತೆ ನಡೆಸಲಾಗುತ್ತಿತ್ತು. ಈ ವೇಳೆ ಬೆಂಗಳೂರು ಮೂಲದ ಇಬ್ಬರು ವ್ಯಕ್ತಿಗಳು, ಕಲ್ಯಾಣ್ ಕುಮಾರ್ ಹಾಗೂ ಉಪನ್ಯಾಸಕ ಸುಮಂತ್ ಎಂಬುವವರ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರ ಎದೆ, ಪಕ್ಕೆಗೆ ಗುಂಡೇಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿದ ಸಖರಾಯಪಟ್ಟಣ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.