ಚಿಕ್ಕಮಗಳೂರು: ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ಇಡೀ ರಾಜ್ಯಕ್ಕೆ ಖ್ಯಾತಿಯಾಗಿದ್ದ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ನಿಂಗೇನಹಳ್ಳಿ ಗ್ರಾಮದ ನಿಂಗೇಗೌಡರ ಎತ್ತು ಮಿಲನ್ ಅನಾರೋಗ್ಯದಿಂದ ಸಾವನ್ನಪ್ಪಿದೆ. ರಾಸುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ, ಅವರು ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಿಲ್ಲ ಎಂದು ಮಾಲೀಕ ಆರೋಪಿಸಿದ್ದಾರೆ.
ಚಿಕ್ಕಮಗಳೂರು, ಮೈಸೂರು, ಹಾಸನ, ಅಜ್ಜಂಪುರ, ಕಡೂರು ಹಾಗೂ ತರೀಕೆರೆ ಸೇರಿದಂತೆ ರಾಜ್ಯಾದ್ಯಂತ ಜೋಡೆತ್ತಿನ ಗಾಡಿ ಸ್ಪರ್ಧೆಗಳಲ್ಲಿ ಸಾಕಷ್ಟು ಘಟಾನುಘಟಿ ಹೋರಿಗಳಿಗೆ ಸೋಲಿನ ರುಚಿ ತೋರಿಸಿದ್ದ ಮಿಲನ್ ಭಾನುವಾರ ಉಸಿರು ನಿಲ್ಲಿಸಿದೆ. ಎತ್ತಿನ ಮಾಲೀಕ ನಿಂಗೇಗೌಡ ಕಳೆದ ಎರಡ್ಮೂರು ವರ್ಷಗಳಿಂದ ಎತ್ತಿನ ಆರೈಕೆಯಲ್ಲಿ ನಿರತರಾಗಿದ್ದರು. ಈ ಎತ್ತನ್ನ ಸ್ಪರ್ಧೆಗೆ ಬಿಟ್ಟು ಬೇರೆ ಕೆಲಸಕ್ಕೆ ಬಳಸುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ.