ಕೆರೆಯಲ್ಲಿ ಈಜಲು ಹೋದ ಐವರು ಯುವಕರು ನೀರು ಪಾಲು:ತೀವ್ರ ಶೋಧ - Five young men drowned in water in Chikkamagaluru
15:02 November 25
ಕೆರೆಯಲ್ಲಿ ಈಜಲು ಹೋದ ಐವರು ಯುವಕರು ನೀರು ಪಾಲಾಗಿದ್ದು, ಚಿಕ್ಕಮಗಳೂರು ತಾಲೂಕಿನ ವಸ್ತಾರೆಯ ಹಿರೇಕೆರೆಯಲ್ಲಿ ತೀವ್ರ ಶೋಧ ಕಾರ್ಯ ನಡೆದಿದೆ.
ಚಿಕ್ಕಮಗಳೂರು:ಕೆರೆಯಲ್ಲಿ ಈಜಲು ಹೋದ ಐವರು ಯುವಕರು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋದ ಐದು ಯುವಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ಚಿಕ್ಕಮಗಳೂರು ತಾಲೂಕಿನ ವಸ್ತಾರೆಯ ಹಿರೇಕೆರೆಯಲ್ಲಿ ಘಟನೆ ನಡೆದಿದೆ. ಈ ಐವರು ಯುವಕರಲ್ಲಿ ಇಬ್ಬರು ಸ್ಥಳಿಯ ನಿವಾಸಿಗಳು ಹಾಗೂ ಇನ್ನು ಮೂವರು ಯುವಕರು ಬೀಗರ ಊಟಕ್ಕೆ ಬಂದವರಾಗಿದ್ದಾರೆ. ರಘು (22), ದಿಲೀಪ್ (24), ಸಂದೀಪ್ (23) ದೀಪಕ್ (25) ಸುದೀಪ್ (22) ನೀರುಪಾಲಾಗಿದ್ದಾರೆ.
ಸ್ಥಳದಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೋಟ್ ಬಳಸಿ ಯುವಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯುವಕರ ನಾಪತ್ತೆಯಿಂದ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.