ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಮಲೆನಾಡಿನಲ್ಲಿ ಸೃಷ್ಟಿಯಾಗುತ್ತಿರುವ ಅವಾಂತರಗಳಿಗೆ ಜನರು ನಲುಗಿ ಹೋಗಿದ್ದಾರೆ.
ಮಲೆನಾಡಿಗೆ ಮಳೆ ಕಂಟಕ: ವರುಣನ ಅವಾಂತರಕ್ಕೆ ನಲುಗಿದ ಕಾಫಿನಾಡು
ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಜಯಪುರ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿದೆ. ತೋಟ, ಗದ್ದೆಗಳು ಅಕ್ಷರಶಃ ನೀರುಪಾಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಲೆನಾಡಿಗೆ ಮತ್ತೆ ಮಳೆ ಕಂಟಕ
ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಜಾವಳಿ, ಜಯಪುರ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತೋಟ, ಗದ್ದೆಗಳು ಅಕ್ಷರಶಃ ನಾಶವಾಗುತ್ತಿವೆ. ಜಿಲ್ಲೆಯ ಕೊಪ್ಪ ತಾಲೂಕಿನ ಹುತ್ತಿನ ಗದ್ದೆ ರಸ್ತೆ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಸಂಚಾರ ಸಮಸ್ಯೆಯಾಗಿದೆ. ಜೊತೆಗೆ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಇನ್ನು ನಿರಂತರ ಮಳೆಯಿಂದಾಗಿ ಸಾವಿರಾರು ಜನರು ತಮ್ಮ ಮನೆ, ತೋಟ, ಗದ್ದೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿ ಬೀದಿಗೆ ಬಂದಿದ್ದಾರೆ.