ಕರ್ನಾಟಕ

karnataka

By

Published : Jun 9, 2021, 8:53 AM IST

ETV Bharat / state

ಕಾಡಾನೆಗಳನ್ನು ಕಾಡಿಗಟ್ಟಿದ್ದ ಅರಣ್ಯ ಇಲಾಖೆ: ಮಲೆನಾಡು ಜನತೆ ನಿರಾಳ

ಮೂರು ಕಾಡಾನೆಗಳು ಕಾಡಿನಿಂದ ನಾಡಿಗೆ ಬಂದಿದ್ದವು. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದರೂ ಸ್ಥಳಕ್ಕೆ ಅಧಿಕಾರಿಗಳು ಬಂದಿರಲಿಲ್ಲ. ಕೊನೆಗೂ ಜನರ ಆಕ್ರೋಶಕ್ಕೆ ಮಣಿದ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮೂರು ಕಾಡಾನೆಗಳನ್ನು ಚನ್ನಡ್ಲು ಅರಣ್ಯಕ್ಕೆ ಓಡಿಸಿದರು.

The forest department that drove the elephant into the woods in Chikmagalur
ಕಾಡಾನೆಗಳನ್ನ ಕಾಡಿಗಟ್ಟಿದ್ದ ಅರಣ್ಯ ಇಲಾಖೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗ್ರಾಮಸ್ಥರಿಗೆ ತೊಂದರೆ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ಜನರು ಬೇಸತ್ತು ಹೋಗಿದ್ದು, ರೈತರು ತಾವು ಬೆಳೆದ ಬೆಳೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದರು. ಹೀಗಾಗಿ ಕಾಡಂಚಿನ ಗ್ರಾಮಗಳು ಹಾಗೂ ಗ್ರಾಮಸ್ಥರು, ಅರಣ್ಯ ಇಲಾಖೆಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದರು. ಕಳೆದ ಮೂರು ದಿನದಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸಬ್ಲಿ ಮತ್ತು ಹೆಬ್ಬರಿಗೆ ಗ್ರಾಮದ ಜನರಿಗೆ ಮೂರು ಕಾಡಾನೆಗಳು ಕಾಣಿಸಿಕೊಂಡು ನಿದ್ದೆಗೆಡಿಸಿದ್ದವು. ಇದರಿಂದಾಗಿ ಜನರು ರಸ್ತೆಯಲ್ಲಿ ಸಂಚಾರ ಮಾಡೋದಕ್ಕೂ ಭಯ ಪಡುವಂತಾಗಿತ್ತು.

ಕಾಡಾನೆಗಳನ್ನ ಕಾಡಿಗಟ್ಟಿದ್ದ ಅರಣ್ಯ ಇಲಾಖೆ

ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದರೂ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಬಂದಿರಲಿಲ್ಲ. ಕೊನೆಗೂ ಜನರ ಆಕ್ರೋಶಕ್ಕೆ ಮಣಿದ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಗಳನ್ನು ಚನ್ನಡ್ಲು ಅರಣ್ಯಕ್ಕೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಹಳ್ಳಿಯ ಜನರು ನಿಟ್ಟುಸಿರು ಬಿಡುವಂತಾಗಿದೆ.

ಈ ಭಾಗದಲ್ಲಿ ಅನೇಕ ಕುಟುಂಬಗಳು ವಾಸವಿದ್ದು ಕಳೆದ ಮೂರು ದಿನಗಳಿಂದ ಕಾಡಾನೆಗಳು ಒಂದೇ ಸ್ಥಳದಲ್ಲಿ ಬೀಡುಬಿಟ್ಟು, ಜನರಲ್ಲಿ ಭಯ ಹುಟ್ಟಿಸಿದ್ದವು. ಒಂದು ಗ್ರಾಮದಿಂದ ಮತ್ತೊಂದು ಗ್ರಾಮದಲ್ಲಿ ಕಾಣಿಸಿಕೊಳ್ಳುವ ಇವುಗಳು ಜನರು ಆತಂಕದಲ್ಲಿರುವಂತೆ ಮಾಡಿದ್ದವು. ರೈತರು ಬೆಳೆದಿರುವಂತಹ ಕಾಫಿ, ಅಡಿಕೆ ಹಾಗೂ ಇತರೆ ಬೆಳೆಗಳು ನಾಶ ಮಾಡುತ್ತಿದ್ದವು.

ಈ ಹಿಂದೆ ಅನೇಕ ಬಾರಿ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಇದನ್ನು ಹೀಗೆಯೇ ಬಿಟ್ಟರೆ ಇಲ್ಲಿನ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಜನರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸತತ ಕಾರ್ಯಾಚರಣೆಯ ಬಳಿಕ ಕಾಡಾನೆಗಳನ್ನು ಕಾಡಿಗೆ ವಾಪಸ್ ಕಳುಹಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details