ಕರ್ನಾಟಕ

karnataka

ETV Bharat / state

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು: 25 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ! - ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಯಾರೋ ಪ್ರವಾಸಿಗರು ಸಿಗರೇಟ್ ಸೇದಿ ಬಿಸಾಕಿದ್ದರಿಂದ ಕಾಡ್ಗಿಚ್ಚು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕಿಸಿದ್ದಾರೆ..

forest fire engulfs in charmadi ghat
ಬೆಂಕಿ ನಂದಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

By

Published : Jan 26, 2022, 1:44 PM IST

ಚಿಕ್ಕಮಗಳೂರು :ಚಾರ್ಮಾಡಿ ಘಾಟ್​​ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಅಂದಾಜು 25 ಎಕರೆ ಅರಣ್ಯ ಪ್ರದೇಶ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯ ಮಾರುತ ಗುಡ್ಡದಲ್ಲಿ ಈ ಘಟನೆ ನಡೆದಿದೆ.

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ವಿವಿಧ ಪ್ರಾಣಿ-ಪಕ್ಷಿಗಳಿಗೆ ಆಸರೆಯಾಗಿರುವ ಚಾರ್ಮಾಡಿ ಘಾಟಿಯ ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಯಾರೋ ಪ್ರವಾಸಿಗರು ಸಿಗರೇಟ್ ಸೇದಿ ಬಿಸಾಕಿದ್ದರಿಂದ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕಿಸಿದ್ದಾರೆ.

ಬೆಂಕಿ ನಂದಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ

ಸಾವಿರಾರು ಎಕರೆ ವಿಸ್ತಾರವಾದ ಈ ಅರಣ್ಯ ಪ್ರದೇಶಕ್ಕೆ ಕಾಡ್ಗಿಚ್ಚು ಆವರಿಸಿರುವ ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಅರಣ್ಯ ಇಲಾಖೆಯ ರೇಂಜರ್ ಮೋಹನ್ ಕುಮಾರ್ ಹಾಗೂ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಕಾಡ್ಗಿಚ್ಚು

ಇದನ್ನೂ ಓದಿ:ರಾಜಪಥದಲ್ಲಿ ಎನ್​ಸಿಸಿ ಕೆಡೆಟ್ಸ್​​​ ನೇತೃತ್ವ ವಹಿಸಿದ ಮೈಸೂರಿನ ವಿದ್ಯಾರ್ಥಿನಿ

ABOUT THE AUTHOR

...view details