ಚಿಕ್ಕಮಗಳೂರು:ಜಿಲ್ಲೆಯಲ್ಲಿ ನೆರೆ ಪೀಡಿತ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಭೇಟಿ ನೀಡಲಿದ್ದಾರೆ.
ಚಿಕ್ಕಮಗಳೂರಿನ ನೆರೆ ಪೀಡಿತ ಪ್ರದೇಶಕ್ಕೆ ಇಂದು ಹೆಚ್ಡಿಕೆ ಭೇಟಿ - ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಚಿಕ್ಕಮಗಳೂರಿನ ಪ್ರವಾಹ ಪೀಡಿತ ಪ್ರದೇಶಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ, ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ನೆರೆ ಹಾವಳಿಗೆ ಸರ್ಕಾರದಿಂದ ಯಾವುದೇ ಪರಿಹಾರ ಬಂದಿಲ್ಲ ಎಂದು ಆತ್ಮಹತ್ಯೆಗೆ ಶರಣಾಗಿದ್ದ ಕಾರ್ಗದ್ದೆ ಗ್ರಾಮದ ಚನ್ನಪ್ಪ ಗೌಡ ಹಾಗೂ ಎಸ್.ಕೆ.ಮೇಗಾಲ್ ಗ್ರಾಮದ ಚಂದ್ರೇಗೌಡ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ.
ಇನ್ನು ಸೂಕ್ತ ಸಮಯಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ ಎಂದು ಒಬ್ಬ ರೈತ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದರೆ, ಇನ್ನೊಬ್ಬ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನ ಪರಿಷತ್ನ ಉಪ ಸಭಾಪತಿ ಎಸ್ಎಲ್ ಧರ್ಮೇಗೌಡ ಹಾಗೂ ಜೆಡಿಎಸ್ ಮುಖಂಡರು ಇವರಿಗೆ ಸಾಥ್ ನೀಡಲಿದ್ದಾರೆ.