ಚಿಕ್ಕಮಗಳೂರು:ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆಯ ಹನಿ ಡ್ಯೂ ರೆಸಾರ್ಟ್ನಲ್ಲಿ ಎಚ್ ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ದು, ರೂಮ್ ಪಕ್ಕದಲ್ಲಿ ಎಚ್ಡಿಕೆ ವಾಕಿಂಗ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಎಚ್ ಡಿ ಕುಮಾರಸ್ವಾಮಿ ಕೂಲ್ ಆಗಿದ್ದು, ಜೆಡಿಎಸ್ ಪಕ್ಷದ ಶಾಸಕರ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಮಗಳ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರಿಗೆ ಎಲ್ಲರೂ ಆಗಮಿಸುತ್ತಿದ್ದು, ಈ ವೇಳೆ ಅನೇಕ ರಾಜಕೀಯ ಚರ್ಚೆಗಳು ಹಾಗೂ ಬೆಳವಣಿಗೆಗಳು ಆಗುವ ಸಾಧ್ಯತೆ ಇದೆ. ಸಂಜೆ ವೇಳೆಗೆ ರೆಸಾರ್ಟ್ಗೆ ಎಲ್ಲಾ ಜೆಡಿಎಸ್ ಶಾಸಕರು ಆಗಮಿಸಲಿದ್ದು, ಇಂದು ತಮ್ಮ ಪಕ್ಷದ ಶಾಸಕರ ಜೊತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚರ್ಚೆ ಮಾಡಲಿದ್ದಾರೆ. ಇದಕ್ಕೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಸಾಕ್ಷಿ ಆಗಲಿದೆ.
ಸಂಜೆ ಶಾಸಕರ ಜೊತೆ ರೆಸಾರ್ಟ್ನಲ್ಲಿ ಸಭೆ ನಡೆಸಲಿದ್ದು, ಎರಡು ದಿನಗಳ ಕಾಲ ರೆಸಾರ್ಟ್ನಲ್ಲಿ ಎಚ್ಡಿಕೆ ವಾಸ್ತವ್ಯ ಹೂಡಲಿದ್ದಾರೆ. ನಾಳೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಮಗಳ ನಿಶ್ಚಿತಾರ್ಥದಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಶಾಸಕರು ಭಾಗವಹಿಸಲಿದ್ದು, ನಿಶ್ಚಿತಾರ್ಥ ಕಾರ್ಯ ಮುಗಿಸಿ ಬೆಂಗಳೂರಿನ ಕಡೆ ಪ್ರಯಾಣ ಮಾಡಲಿದ್ದಾರೆ.
ರೆಸಾರ್ಟ್ನಲ್ಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ಕಾರಣ ರೆಸಾರ್ಟ್ನ ರೂಂನತ್ತ ಉಳಿದವರಿಗೆ ಪ್ರವೇಶ ನಿರಾಕರಿಸಲಾಗಿದೆ. ರೆಸಾರ್ಟ್ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದು, ಮಾಧ್ಯಮಗಳಿಗೆ ಕುಮಾರಸ್ವಾಮಿ ಸಿಗೋದು ಡೌಟ್ ಎಂದು ಹೇಳಿದ್ದಾರೆ.