ಕರ್ನಾಟಕ

karnataka

ETV Bharat / state

ರಾಜ್ಯದ ವಿವಿಧೆಡೆ ಭೀಕರ ರಸ್ತೆ ಅಪಘಾತ: ಐವರು ಸಾವು

ವಿವಿಧಡೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ನಡೆದಿದೆ. ಆಯಾ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿವೆ.

Four people died in road accident
Four people died in road accident

By

Published : May 11, 2023, 3:46 PM IST

ಚಿಕ್ಕಮಗಳೂರು:ಕಾರು ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿಯ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮಯಾಂಕ್(3) ಹಾಗೂ ಗಿರಿಧರ್ (46) ಮೃತರು. ಅಪಘಾತದ ವೇಳೆ ಟಿಟಿ ವಾಹನ ಪಲ್ಟಿಯಾಗಿದೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ರಸ್ತೆ ಅಪಘಾತ

ಗಿರಿಧರ್ ಕುಟುಂಬವು ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದರೆ, ಕೇರಳದಿಂದ ಚಿಕ್ಕಮಗಳೂರಿಗೆ ಟಿಟಿ ವಾಹನ ಪ್ರವಾಸಕ್ಕೆ ಬರುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಮೃತರು

ಕಾರು-ಬೈಕ್ ನಡುವೆ‌ ಬೀಕರ‌ ರಸ್ತೆ ಅಪಘಾತ: ಮತ್ತೊಂದೆಡೆ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಯಲಹಂಕ ತಾಲೂಕಿನ ರಾಜಾನುಕುಂಟೆ ರಸ್ತೆಯ ಚಲ್ಲಹಳ್ಳಿ ಬಳಿ ಈ ದುರಂತ ಸಂಭವಿಸಿದೆ. ಚಲ್ಲಹಳ್ಳಿ ಗ್ರಾಮದ ರಾಮಯ್ಯ (39) ಹಾಗೂ ನಾಗರಾಜ್ (42) ಮೃತರು.

ರಸ್ತೆ ಅಪಘಾತ

ಅಪಘಾತದ ರಭಸಕ್ಕೆ ಬೈಕ್ ಮತ್ತು ಕಾರಿನ ಮುಂಬಾಗ ಸಂಪೂರ್ಣವಾಗಿ ಜಖಂ ಆಗದೆ. ಮೃತರಿಬ್ಬರು ರಾಜನುಕುಂಟೆ ಬಳಿ ಪೀಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಇಂದು ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಅತಿವೇಗದಿಂದ ಬಂದ ಕಾರು ಇವರ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಬೈಕ್ ನೂರು ಮೀಟರ್ ದೂರದಲ್ಲಿ ಹಾರಿ ಬಿದ್ದಿದೆ. ಆದರೆ, ಇದು ಅಪಘಾತವಲ್ಲ, ದ್ವೇಷದ ಹಿನ್ನೆಲೆಯೆಲ್ಲಿ ಕೊಲೆ ಮಾಡಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾಜನುಕುಂಟೆ ಪೊಲೀಸ್ ಠಾಣೆ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನ್ಯಾಯಕ್ಕಾಗಿ ಪೋಷಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಮೃತ ಸಂಬಂಧಿಕರ ಆಕ್ರಂದನ

ಭೀಕರ ಅಪಘಾತದಲ್ಲಿ ಅಜ್ಜಿ ಸಾವು, ಮೊಮ್ಮಗನ ಸ್ಥಿತಿ ಗಂಭೀರ..ಆನೇಕಲ್​ ತಾಲೂಕಿನಲ್ಲಿ ದ್ವಿಚಕ್ರವಾಹನಕ್ಕೆ ಟಿಪ್ಪರ್​ ಲಾರಿ ಗುದ್ದಿ ಪರಿಣಾಮ ಅಜ್ಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹ ಗುರುತು ಸಿಗಲಾರದಷ್ಟು ನಜ್ಜುಗುಜ್ಜಾಗಿದೆ. ಮೊಮ್ಮಗನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್​ಗೆ ಟಿಪ್ಪರ್​ ಹಿಂಬದಿಯಿಂದ ಡಿಕ್ಕಿ ಹೊಡೆದು ಮೈಮೇಲೆ ಹರಿದ ಪರಿಣಾಮ ಈ ಬೀಕರ ಅಪಘಾತ ಸಂಭವಿಸಿದೆ. ಈ ಘಟನೆಯಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು ಟಿಪ್ಪರ್​ ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಇದನ್ನೂ ಓದಿ:ಕೇರಳ ವೈದ್ಯೆ ಕೊಂದ ಕುಡುಕ ಹಂತಕನಿಗೆ 14 ದಿನ ನ್ಯಾಯಾಂಗ ಬಂಧನ, ಕೊಲೆ ಕಾರಣ ನಿಗೂಢ

ABOUT THE AUTHOR

...view details