ಕರ್ನಾಟಕ

karnataka

ETV Bharat / state

ಚಾರ್ಮಾಡಿ ಘಾಟ್​ನಲ್ಲಿ ಕಾರು ಕಂದಕಕ್ಕೆ ಉರುಳಿ ನಾಲ್ವರಿಗೆ ಗಾಯ : ಸ್ನಾನಕ್ಕೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು - ಚಾರ್ಮಾಡಿ ಘಾಟ್​​ನಲ್ಲಿ ಕಂದಕಕ್ಕೆ ಉರುಳಿದ ಕಾರು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಕಾರು ಕಂದಕಕ್ಕೆ ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ತುಂಗಾ‌ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

Four people injured in car overturned in Charmadi ghat
ಚಾರ್ಮಾಡಿ ಘಾಟ್ ಕಂದಕಕ್ಕೆ ಉರುಳಿ ನಾಲ್ವರಿಗೆ ಗಾಯ

By

Published : Mar 14, 2022, 5:20 PM IST

ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್​​​ನಲ್ಲಿ ಕಂದಕಕ್ಕೆ ಕಾರು ಉರುಳಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​​​ನ ಮೊದಲನೇ ತಿರುವಿನಲ್ಲಿ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯರು ಹಾಗೂ ಚಾರ್ಮಾಡಿ ಹಸನಬ್ಬ ತಂಡ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೀರಲ್ಲಿ ಮುಳುಗಿ ಯುವಕ ಸಾವು:

ಸ್ನಾನಕ್ಕೆ ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು

ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್​ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ‌ ನದಿಗೆ ನಿರ್ಮಿಸಲಾಗಿರುವ ತೂಗು ಸೇತುವೆ ಬಳಿ ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ‌ ಸಾವನ್ನಪ್ಪಿದ್ದಾನೆ. ಸುನೀಲ್ (29) ಮೃತ ಯುವಕ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕೊಪ್ಪ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಹನೂರಲ್ಲಿ ಹಳ್ಳಕ್ಕೆ ಬಿದ್ದ ಕೆಎಸ್​ಆರ್​ಟಿಸಿ ಬಸ್​ : ವೃದ್ಧೆ ಸೇರಿ ಇಬ್ಬರು ಸಾವು, ಐವರು ಪ್ರಯಾಣಿಕರ ಸ್ಥಿತಿ ಗಂಭೀರ

For All Latest Updates

TAGGED:

ABOUT THE AUTHOR

...view details