ಚಿಕ್ಕಮಗಳೂರು:ಮಳೆಗಾಲ ಬಂತೆಂದೆರೆ ಸಾಕು ಮಲೆನಾಡು ಭಾಗದ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತವೆ. ಅದರಲ್ಲೂ ಅತಿ ಹೆಚ್ಚು ಮಂಜು ಕವಿದ ವಾತವರಣ ಮತ್ತು ನೀರು ಹರಿಯುವ ತಾಣಗಳನ್ನು ಮಳೆಗಾಲದಲ್ಲಿ ಕಣ್ತುಂಬಿಕೊಳ್ಳುವುದೆ ಚೆಂದ.
ಮಲೆನಾಡಿಗೆ ಪ್ರವಾಸಿಗರ ದಂಡು... ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಹೈರಾಣ - tourist place
ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಕೈಮರ ಚೆಕ್ ಪೋಸ್ಟ್ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತ ಪೀಠದ ಮಾರ್ಗ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ.
ಅದೇ ರೀತಿ ಸುಂದರ ಪ್ರವಾಸಿ ತಾಣಗಳನ್ನು ಹೊಂದಿರುವ ಮತ್ತು ಸದಾ ಮಳೆಯಿಂದ ಕೂಡಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.
ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತ ಪೀಠದ ಮಾರ್ಗದಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಒಂದು ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ. ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್ನಿಂದ ಪ್ರವಾಸಿಗರು ಹೈರಾಣಾಗಿದ್ದು, ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಟ್ರಾಫಿಕ್ ಕ್ಲೀಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು, ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ನಲ್ಲಿ ಟ್ರಾಫಿಕ್ ಜಾಮ್ನಿಂದ ಕಿರಿಕಿರಿ ಉಂಟಾಗಿದೆ.