ಕರ್ನಾಟಕ

karnataka

ETV Bharat / state

ಒಂದು ಗಂಟೆಯಿಂದ ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಜಾಮ್... ವಾಹನ ಸವಾರರು ಹೈರಾಣ - undefined

ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಪರಿಣಾಮ ಕಳೆದ ಒಂದು ಗಂಟೆಯಿಂದ ಟ್ರಾಫಿಕ್ ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಜಾಮ್

By

Published : Jun 7, 2019, 5:39 PM IST

ಚಿಕ್ಕಮಗಳೂರು: ಪ್ರವಾಸೋದ್ಯಮಕ್ಕೆ ನೆಚ್ಚಿನ ತಾಣ ಎಂದು ಹೆಸರುವಾಸಿಯಾದ ಚಿಕ್ಕಮಗಳೂರು ಜಿಲ್ಲೆಗೆ ಸಾವಿರಾರೂ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಕಳೆದ ಒಂದು ಗಂಟೆಯಿಂದ ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಜಾಮ್​

ಜಿಲ್ಲೆಯ ಕೈಮರ ಚೆಕ್ ಪೋಸ್ಟ್​ನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತಪೀಠದ ಮಾರ್ಗ ಸಂಪೂರ್ಣ ಜಾಮ್ ಆಗಿ ಸುಮಾರು 1 ಕಿ.ಮೀ.ನಷ್ಟು ದೂರ ವಾಹನಗಳು ನಿಂತಲ್ಲೇ ನಿಂತಿವೆ.

ಟ್ರಾಫಿಕ್ ಜಾಮ್‌ನಿಂದ ಪ್ರವಾಸಿಗರ ಜೊತೆಗೆ ಸ್ಥಳೀಯರು ಕೂಡ ಹೈರಾಣಾಗಿದ್ದಾರೆ. ಇನ್ನು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details