ಚಿಕ್ಕಮಗಳೂರು : ಹೋಟೆಲ್ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ, ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ, ಮೂವರಿಗೆ ಗಂಭೀರ ಗಾಯ - ಚಿಕ್ಕಮಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ
ಚಿಕ್ಕಮಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರ ಗಾಯ
ಸಿಂಗಟಗೆರೆ ಗ್ರಾಮದ ಸುರೇಶ್ ಎಂಬವರ ಹೋಟೆಲ್ನಲ್ಲಿ ಅವಘಗಡ ಜರುಗಿದ್ದು ಸುರೇಶ್, ಗೀತಮ್ಮ, ತಿಪ್ಪೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸಿಂಗಟಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.