ಚಿಕ್ಕಮಗಳೂರು: ರಂಜಾನ್ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಲಿಲ್ಲ ಎಂದು ಯುವತಿಯೊಬ್ಬಳು ನೇಣು ಬಿಗಿದುಕೊಂಡ ಘಟನೆ ಮುದುಗುಣಿಯಲ್ಲಿ ನಡೆದಿದೆ.
ರಂಜಾನ್ಗೆ ಹೊಸ ಬಟ್ಟೆ ಕೊಡಿಸಲಿಲ್ಲ ಎಂದು ನೇಣು ಬಿಗಿದುಕೊಂಡ ಯುವತಿ
ರಂಜಾನ್ ಆಚರಣೆ ಹಿನ್ನೆಲೆ ಹೊಸ ಬಟ್ಟೆ ಕೊಡಿಸಲಿಲ್ಲಾ ಎಂದು ನೊಂದ ಅಸ್ಸಾಂನ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಎನ್ ಆರ್ ಪುರದಲ್ಲಿ ನಡೆದಿದೆ. ನವೀನ್ ಲಾಯ್ಡ್ ಮಿಸ್ಕತ್ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಲ್ಕಿಮಾ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಂಜಾನ್ಗೆ ಹೊಸ ಬಟ್ಟೆ ಕೊಡಿಸಲಿಲ್ಲ ಎಂದು ನೇಣಿಗೆಶರಣಾದ ಯುವತಿ
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲೂಕಿನ ಮುದುಗುಣಿಯಲ್ಲಿರುವ ನವೀನ್ ಲಾಯ್ಡ್ ಮಿಸ್ಕತ್ ಎಂಬುವರ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಹಲ್ಕಿಮಾ (22) ಆತ್ಮಹತ್ಯೆ ಮಾಡಿಕೊಂಡ ಯುವತಿ.
ರಂಜಾನ್ ಹಬ್ಬಕ್ಕೆ ಕುಟುಂಬಸ್ಥರು ಹೊಸ ಬಟ್ಟೆ ಕೊಡಿಸಿಲ್ಲ ಎಂದು ಬೇಸರಗೊಂಡು ವೇಲಿನ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : May 27, 2020, 7:40 PM IST