ಕರ್ನಾಟಕ

karnataka

ETV Bharat / state

ಶೃಂಗೇರಿ ಸ್ತಬ್ಧ: 100 ಬೆಡ್​ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹ - chikkamagaluru latest news

ಶೃಂಗೇರಿಯಲ್ಲಿ 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗಾಗಿ ಜನರು ಮನವಿ ಮಾಡುತ್ತಿದ್ದಾರೆ. ಇದೀಗ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯಿಂದ ಬಂದ್​ಗೆ ಕರೆ ಕೊಡಲಾಗಿದ್ದು, ಶೃಂಗೇರಿ ಸಂಪೂರ್ಣ ಸ್ತಬ್ಧವಾಗಿದೆ.

shringeri band
ಶೃಂಗೇರಿ ಸ್ತಬ್ಧ

By

Published : Oct 22, 2021, 1:27 PM IST

ಚಿಕ್ಕಮಗಳೂರು: 100 ಬೆಡ್​ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಬಂದ್​​ಗೆ ಕರೆ ಕೊಡಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗಿನ ಸ್ವಯಂಪ್ರೇರಿತ ಬಂದ್​ಗೆ ವ್ಯಾಪಕ ಬೆಂಬಲ ದೊರೆತಿದ್ದು, ಶೃಂಗೇರಿ ಸಂಪೂರ್ಣ ಸ್ತಬ್ಧವಾಗಿದೆ.

ಶೃಂಗೇರಿ ಸ್ತಬ್ಧ

ಶೃಂಗೇರಿಯಲ್ಲಿ 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗಾಗಿ ಜನರು ಮನವಿ ಮಾಡುತ್ತಿದ್ದಾರೆ. ಇದೀಗ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯಿಂದ ಬಂದ್​ಗೆ ಕರೆ ನೀಡಲಾಗಿದೆ. ಈ ಮೂಲಕ ಸೂಕ್ತ ಆಸ್ಪತ್ರೆ ವ್ಯವಸ್ಥೆಗೆ ಆಗ್ರಹಿಸಲಾಗಿದ್ದು, ಪ್ರವಾಸಿಗರು ಹಾಗೂ ಭಕ್ತರು ಇಂದು ಶೃಂಗೇರಿಗೆ ಬರದಂತೆ ಮನವಿ ಮಾಡಲಾಗಿದೆ.

ಬಂದ್​ಗೆ ಸ್ಥಳೀಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಹೊರ ಭಾಗಗಳಲ್ಲಿ ಬಸ್ಸುಗಳನ್ನು ಅಡ್ಡ ಹಾಕಿ ಗ್ರಾಮಸ್ಥರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಟ್ಟಣ ಹಾಗೂ ಗ್ರಾಮಾಂತರ ಭಾಗ ಸಂಪೂರ್ಣ ಸ್ತಬ್ಧವಾಗಿದ್ದು, 35ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ.

ಇದನ್ನೂ ಓದಿ:ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ತುಮಕೂರು ಬಂದ್​ಗೆ ಉತ್ತಮ ಪ್ರತಿಕ್ರಿಯೆ

ಮೆಡಿಕಲ್ ಶಾಪ್​​​ಗಳಲ್ಲೂ ಅರ್ಧ ಬಾಗಿಲು ಹಾಕಿ ಮಾಲೀಕರು ಈ ಬಂದ್​ಗೆ ಬೆಂಬಲ ಸೂಚಿಸುತ್ತಿದ್ದಾರೆ. ಶೃಂಗೇರಿ ತಾಲೂಕಿನ ಕುಂಚೇಬೈಲು, ಬಿದರಗೋಡು, ಅಗಳಗಂಡಿ, ನೆಮ್ಮಾರು, ಕಿಗ್ಗ ಇನ್ನಿತರೆ ಹಳ್ಳಿಗಳಲ್ಲೂ ಅಂಗಡಿಗಳನ್ನು ಸಂಪೂರ್ಣ ಮುಚ್ಚಲಾಗಿದೆ.

ABOUT THE AUTHOR

...view details