ಕರ್ನಾಟಕ

karnataka

ETV Bharat / state

ರಾಜ್ಯದ ಮೊಟ್ಟ ಮೊದಲ ಗೋಶಾಲೆ ಲೋಕಾರ್ಪಣೆ; ದತ್ತು ಪಡೆಯುವ ಪ್ರಕ್ರಿಯೆ ಹೀಗಿದೆ - Chikkamaguru Government Goshala

ಸುಮಾರು ಎರಡು ಎಕರೆ ಪ್ರದೇಶದಲ್ಲಿ ಈ ಗೋಶಾಲೆ ನಿರ್ಮಾಣವಾಗಿದ್ದು, ಎಂಟು ಎಕರೆ ಪ್ರದೇಶದಲ್ಲಿ ಮೇವು ಬೆಳೆಯಲು ಜಾಗ ಮೀಸಲಿರಿಸಲಾಗಿದೆ. 11,000 ಸಾವಿರ ರೂ. ಸಂದಾಯ ಮಾಡಿ ಒಂದು ವರ್ಷ ಅವಧಿಗೆ ಒಂದು ಗೋವು ದತ್ತು ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

Government Goshala Established In Chikkamaguru
Government Goshala Established In Chikkamaguru

By

Published : Jun 27, 2022, 2:25 PM IST

ಚಿಕ್ಕಮಗಳೂರು:ರಾಜ್ಯದ ಮೊಟ್ಟ ಮೊದಲ ಗೋಶಾಲೆಯನ್ನು ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಾರ್ಪಣೆ ಮಾಡಲಾಗುತ್ತಿದೆ. ಕಡೂರು ತಾಲೂಕಿನ ಎಮ್ಮೆದೊಡ್ಡಿ ಎಂಬ ಗ್ರಾಮದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಇಂದು ಈ ಸರ್ಕಾರಿ ಗೋಶಾಲೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ ಒಂದು ಸರ್ಕಾರಿ ಗೋಶಾಲೆಯನ್ನು ನಿರ್ಮಾಣ ಮಾಡುವುದಾಗಿ ಈ ಹಿಂದೆ ಬಜೆಟ್​ನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇಂದು ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಮದಲ್ಲಿ ಸಚಿವ ಪ್ರಭು ಚೌಹಾಣ್ ಲೋಕಾರ್ಪಣೆಗೊಳಿಸಲಿದ್ದಾರೆ.

ಸುಮಾರು 53 ಲಕ್ಷ ರೂ. ವೆಚ್ಚದಲ್ಲಿ ಈ ಗೋಶಾಲೆಯನ್ನು ನಿರ್ಮಾಣ ಮಾಡಲಾಗಿದ್ದು, 200ಕ್ಕೂ ಹೆಚ್ಚು ಜಾನುವಾರುಗಳಿಗೆ ಈ ಜಾಗ ಆಶ್ರಯ ನೀಡುವ ತಾಣವಾಗಿದೆ. ಬಿಡಾಡಿ ಜಾನುವಾರುಗಳು ಹಾಗೂ ರೈತರಿಗೆ ಸಾಕಲು ಕಷ್ಟವಾಗುವ ಜಾನುವಾರುಗಳು ಹಾಗೂ ವಿವಿಧ ಪ್ರಕರಣಗಳಲ್ಲಿ ದಾಳಿ ಮಾಡಿ ವಶಪಡಿಸಿಕೊಂಡ ಜಾನುವಾರುಗಳನ್ನು ಇಲ್ಲಿ ತಂದು ಪೋಷಣೆ ಮಾಡಬಹುದಾಗಿದೆ.

ಸುಮಾರು ಎರಡು ಎಕರೆ ಪ್ರದೇಶದಲ್ಲಿ ಈ ಗೋಶಾಲೆ ನಿರ್ಮಾಣವಾಗಿದ್ದು, ಎಂಟು ಎಕರೆ ಪ್ರದೇಶದಲ್ಲಿ ಮೇವು ಬೆಳೆಯಲು ಜಾಗ ಮೀಸಲಿರಿಸಲಾಗಿದೆ. 11,000 ಸಾವಿರ ರೂ. ಸಂದಾಯ ಮಾಡಿ ಒಂದು ವರ್ಷ ಅವಧಿಗೆ ಒಂದು ಗೋವನ್ನು ದತ್ತು ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ತಡೆದು ನಿಲ್ಲಿಸದಿರಿ.. ಪ್ರವೀಣ್ ಸೂದ್ ಸೂಚನೆ

ABOUT THE AUTHOR

...view details