ಕರ್ನಾಟಕ

karnataka

ETV Bharat / state

ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲಿ: ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ - ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರಕ್ಕೆ ಮಾನ‌, ಮರ್ಯಾದೆ ಇದ್ದರೆ ಅತಿಥಿ ಉಪನ್ಯಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಒತ್ತಾಯಿಸಿದರು.

Guest lecturer protest for demands
ಅತಿಥಿ ಉಪನ್ಯಾಸಕರಿಂದ ಪಾದಯಾತ್ರೆ

By

Published : Jan 4, 2022, 7:33 PM IST

ಚಿಕ್ಕಮಗಳೂರು: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜಿಲ್ಲೆಯ ಕಡೂರಿನಲ್ಲಿ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಬೆಂಗಳೂರಿನ ಕಡೆ ಪಾದಯಾತ್ರೆ ನಡೆಸಲಾಯಿತು.

ಕಡೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಅತಿಥಿ ಉಪನ್ಯಾಸಕರು ಬಸವೇಶ್ವರ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳ ಜೊತೆಗೂಡಿ ಸಾಂಕೇತಿಕವಾಗಿ ಪ್ರತಿಭಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಸಹ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲಿಸಿ ಅವರ ಜೊತೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಹೋರಾಟ ಬೆಂಬಲಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೂ ಸಹ ಧರಣಿಯಲ್ಲಿ ಪಾಲ್ಗೊಂಡಿದ್ದವು.


ಕಾಂಗ್ರೆಸ್ ನಾಯಕಿಯೂ ಆದ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಇದೇ ಸಂದರ್ಭದಲ್ಲಿ ಮಾತನಾಡಿ, ಸರ್ಕಾರಕ್ಕೆ ಮಾನ‌, ಮರ್ಯಾದೆ ಇದ್ದರೆ ಅತಿಥಿ ಉಪನ್ಯಾಸಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ನೈತಿಕ ಬೆಂಬಲವಿದೆ. ಅವರ ಸಮಸ್ಯೆಗಳ ಪರಿಹಾರಕ್ಕೆ ನಡೆಸುತ್ತಿರುವ ಹೋರಾಟಕ್ಕೆ ಸದಾ ಜೊತೆಗಿರುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕ ಹರ್ಷ ಶಾನುಭಾಗ್ ಅವರ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ಶಿವಮೊಗ್ಗದಿಂದ ಬೆಂಗಳೂರಿನತ್ತ ಹೊರಟ ಅತಿಥಿ ಉಪನ್ಯಾಸಕರ ಪಾದಯಾತ್ರೆಯನ್ನು ನಗರ ಪ್ರವೇಶದಲ್ಲಿ ಸ್ವಾಗತಿಸಿ ಅವರ ಜೊತೆ ಕಡೂರು ಗಡಿಯವರೆಗೆ ನಡೆದು ಬೀಳ್ಕೊಡಲಾಯಿತು. ಈ ಪ್ರತಿಭಟನೆಯಲ್ಲಿ ನೂರಾರು ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ABOUT THE AUTHOR

...view details