ಚಿಕ್ಕಮಗಳೂರು: ಜಿಲ್ಲೆಯ ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ನಿನ್ನೆ ರಾತ್ರಿಯಿಂದ ಮಳೆಯ ಅಬ್ಬರ ಜೋರಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾರೀ ಮಳೆ - ಚಿಕ್ಕಮಗಳೂರು ಮಳೆ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಮಧುಗುಂಡಿ, ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ.
ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಮಧುಗುಂಡಿ, ಕಳಸ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಕಳಸ, ಕುದುರೆಮುಖ ವ್ಯಾಪ್ತಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಲವಾರು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಿನ್ನ ಬೆಳಗ್ಗೆಯಿಂದ ಒಂದೇ ಸಮನೆ ಸುರಿಯುತ್ತಿರೋ ಮಳೆಯಿಂದ ಮಲೆನಾಡು ಭಾಗದ ಜನರು ಕಂಗಾಲಾಗಿದ್ದು, ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ದಲ್ಲಿಯೂ ವ್ಯತ್ಯಯ ಕಂಡು ಬರುತ್ತಿದೆ. ಅಲ್ಲದೆ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗುತ್ತಿದೆ.