ಚಿಕ್ಕಮಗಳೂರು: ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲು ಪ್ರಾರಂಭ ಮಾಡಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ, ಕಳೆದ ಒಂದು ಗಂಟೆಯಿಂದ ನಿರಂತರ ಧಾರಾಕಾರ ಮಳೆ ಸುರಿಯಲು ಪ್ರಾರಂಭವಾಗಿದ್ದು, ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಕಳಸ, ಶೃಂಗೇರಿ, ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ನಿರಂತರವಾಗಿ ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ವಾಹನ ಸಂಚಾರದಲ್ಲಿ ಕೂಡ ಅಸ್ತವ್ಯಸ್ತ ಉಂಟಾಗಿದೆ. ಮಲೆನಾಡು ಭಾಗದಲ್ಲಿ ಕೆಲ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಹಾಗೂ ಮಲೆನಾಡು ಭಾಗದ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನು ನಿರಂತರವಾಗಿ ಎಡಬಿಡದೆ, ಧಾರಾಕಾರವಾಗಿ ಸುರಿಯುತ್ತಿರುವ ಈ ಮಳೆಯಿಂದ ಈಗಾಗಲೇ ಮಲೆನಾಡು ಭಾಗದಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದಕ್ಕೆ ಮಲೆನಾಡು ಭಾಗದಲ್ಲಿ ಜನರು ಬೆಚ್ಚಿ ಬಿದ್ದಿದ್ದಾರೆ.