ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣದೇವ ಅಬ್ಬರಿಸಿದ್ದಾನೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ಮೂಡಿಗೆರೆಯಲ್ಲಿ ನಾಲ್ಕು ದಿನಗಳಿಂದ ಜನ ಮನೆಯಿಂದ ಹೊರಬರಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಮಲೆನಾಡು ಭಾಗದಲ್ಲಿ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ - ವರುಣನ ಆರ್ಭಟ
ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ, ಮೂಡಿಗೆರೆಯಲ್ಲಿ ನಾಲ್ಕು ದಿನಗಳಿಂದ ಜನ ಮನೆಯಿಂದ ಹೊರಬರಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಮೂಡಿಗೆರೆ ತಾಲೂಕಿನಾದ್ಯಂತ ಸುರಿಯುತ್ತಿರೋ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಾರ್ಮಾಡಿಯಲ್ಲಿ ಅಲ್ಲಲ್ಲೇ ಮರಗಳು ರಸ್ತೆಗೆ ಉರುಳಿ ಬಿದ್ದಿದ್ದು, ಸಂಚಾರದಲ್ಲಿ ಏರುಪೇರು ಉಂಟಾಗಿದೆ. ಇನ್ನು ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ, ಬಾಳೆಹೊನ್ನೂರಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಹೇಮಾವತಿ, ತುಂಗಾ-ಭದ್ರಾ, ನೇತ್ರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.
ಮುಂಜಾಗೃತ ಕ್ರಮವಾಗಿ ಇಂದೂ ಕೂಡ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಚಿಕ್ಕಮಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಅಪರ ಜಿಲ್ಲಾಧಿಕಾರಿ ಕುಮಾರ್ ರಜೆ ಘೋಷಣೆ ಮಾಡಿದ್ದಾರೆ.