ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಆರ್ಭಟ: ಕಾಫಿನಾಡಿನಲ್ಲಿ ಶಾಲೆಗಳಿಗೆ ರಜೆ - ಕರ್ನಾಟಕ ಮಳೆ ಮಾಹಿತಿ

ರಾಜ್ಯಾದ್ಯಂತ ಇನ್ನೂ 4 ದಿನ ಮಳೆ ಆರ್ಭಟ-ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್​- ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

heavy-rain-continues-in-many-parts-of-karnataka
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ: ಕಾಫಿನಾಡಿನ ಹಲವೆಡೆ 4 ದಿನ ಶಾಲೆಗೆ ರಜೆ

By

Published : Jul 6, 2022, 1:34 PM IST

ಬೆಂಗಳೂರು/ಚಿಕ್ಕಮಗಳೂರು:ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಜುಲೈ 9ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ವರುಣನ ಆರ್ಭಟ ಜೋರಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬುಧವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಜಾರಿ ಮಾಡಲಾಗಿದೆ.

ಚಿಕ್ಕಮಗಳೂರಲ್ಲಿ ಶಾಲೆಗೆ ರಜೆ

ಚಿಕ್ಕಮಗಳೂರಲ್ಲಿ ಶಾಲೆಗೆ ರಜೆ:ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ 4 ದಿನಗಳ ಕಾಲ ರಜೆ ನೀಡಿದೆ. ಮೂಡಿಗೆರೆ, ಕಳಸ, ಎನ್.ಆರ್ ಪುರ, ಕೊಪ್ಪ, ಶೃಂಗೇರಿ ಹಾಗೂ ಚಿಕ್ಕಮಗಳೂರು(ಲಕ್ಯಾ, ಅಂಬಳೆ ಹೋಬಳಿ ಹೊರತು ಪಡಿಸಿ) ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಿಂದ ಜುಲೈ9ರ ತನಕ ರಜೆ ನೀಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಉತ್ತರಕನ್ನಡದಲ್ಲಿ ಭಾರಿ ಮಳೆ.. ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ABOUT THE AUTHOR

...view details