ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಇಂದು ಧಾರಾಕಾರವಾಗಿ ಮಳೆ ಸುರಿದಿದೆ.
ಚಿಕ್ಕಮಗಳೂರಲ್ಲಿ ಅಬ್ಬರಿಸಿದ ವರುಣ: ಬಿಸಿಲಿಗೆ ಬಳಲಿದ್ದ ಜನರ ಮೊಗದಲ್ಲಿ ಮಂದಹಾಸ - ಚಿಕ್ಕಮಗಳೂರಲ್ಲಿ ಮಳೆ ಆರಂಭ
ಚಿಕ್ಕಮಗಳೂರು ಸೇರಿದಂತೆ ಬಾಳೆಹೊನ್ನೂರು, ಕಳಸ, ಶೃಂಗೇರಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಬೇಸಿಗೆ ಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
ಚಿಕ್ಕಮಗಳೂರು ಸುತ್ತ ಮಳೆಯ ಆರ್ಭಟ
ನಗರ ಸೇರಿದಂತೆ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ ಸುತ್ತಮುತ್ತ ಮಳೆ ಸುರಿಯುತ್ತಿದೆ. ಬೇಸಿಗೆಯ ಬಿಸಿಲಿಗೆ ಕಾದ ಹಂಚಿನಂತಾಗಿದ್ದ ಧರೆಗೆ ವರುಣ ತಂಪೆರೆದಿದ್ದಾನೆ.
ಭಾರಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಿದ್ದು, ಮಲೆನಾಡಿನ ಕೆಲ ಭಾಗದಲ್ಲೂ ಮೋಡ ಕವಿದ ವಾತಾವರಣವಿದೆ.