ಕರ್ನಾಟಕ

karnataka

ETV Bharat / state

ಕಾಫಿನಾಡಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - Chikkamaglur latest news

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದೊಂದು ಗಂಟೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Rain news
Rain news

By

Published : Jun 1, 2020, 4:05 PM IST

ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ಗಂಟೆಯಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ.

ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಗುಡುಗು ಮಿಂಚು ಸಹಿತ ಮಳೆಯಾಗುತ್ತಿದ್ದು, ವಾಹನ ಸಂಚಾರದಲ್ಲಿ ಅಡೆಚಣೆ ಉಂಟಾಗಿತ್ತು. ಕೆಲ ಭಾಗಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.

ಜಿಲ್ಲೆಯ ಬಯಲುಸೀಮೆ ಭಾಗವಾದ ತರೀಕೆರೆ, ಕಡೂರಿನಲ್ಲಿಯೂ ಮಳೆಯಾಗುತ್ತಿದೆ.

ABOUT THE AUTHOR

...view details