ಚಿಕ್ಕಮಗಳೂರು:ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರ ಸಂಚಾರಕ್ಕೆ ತೊಂದರೆಯಾಗಿದೆ.
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ - ಚಿಕ್ಕಮಗಳೂರು ಜಿಲ್ಲೆ ಸುದ್ದಿ
ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಧಾರಾಕಾರ ಮಳೆ
ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಕಳಸ, ಶೃಂಗೇರಿ, ಕಡೂರಿನಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.