ಚಿಕ್ಕಮಗಳೂರು: ಜಿಲ್ಲೆಯ ಗಿರಿ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಕೆಮ್ಮಣ್ಣುಗುಂಡಿ ಭಾಗದಲ್ಲಿಯೂ ನಿರಂತರ ವರ್ಷಧಾರೆಯಿಂದ ಸಣ್ಣಪುಟ್ಟ ಜಲಪಾತಗಳು ಮೈದುಂಬಿ ಭೋರ್ಗರೆದು ಹರಿಯುತ್ತಿವೆ.
ಚಿಕ್ಕಮಗಳೂರು: ಜಡಿಮಳೆಗೆ ಉಕ್ಕಿ ಹರಿಯುತ್ತಿವೆ ಜಲಪಾತಗಳು - Chikkamagaluru rain updates
ಕಾಫಿನಾಡಿನಲ್ಲಿ ಮಳೆಯಬ್ಬರ ಜೋರಾಗಿದೆ. ಧುಮ್ಮಿಕ್ಕಿ ಹರಿಯುತ್ತಿರುವ ಇಲ್ಲಿನ ಜಲಪಾತಗಳು ಸದ್ಯ ಪ್ರವಾಸಿಗರನ್ನು ತನ್ನೆಡೆಗೆ ಆಕರ್ಷಿಸುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ
ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪ ಬರುವ ಐತಿಹಾಸಿಕ ಕಲ್ಲತ್ತಗಿರಿ ಫಾಲ್ಸ್ ಕೂಡ ತುಂಬಿ ಹರಿಯುತ್ತಿದೆ. ಜಲಧಾರೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಈ ಭಾಗಕ್ಕೆ ಭೇಟಿ ನೀಡುತ್ತಿದ್ದಾರೆ.