ಚಿಕ್ಕಮಗಳೂರು:ಜಿಲ್ಲೆಯ ಕಡೂರು ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕಾಫಿನಾಡಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
Heavy rain in Chikkamagaluru district
ಕಡೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗಂಟೆಗೂ ಅಧಿಕ ಕಾಲ ಮಳೆಯಾಗಿದ್ದು, ಮಳೆ ನೀರು ಬಟ್ಟೆ, ಚಿನ್ನದ ಅಂಗಡಿಗಳಿಗೆ ನುಗ್ಗಿದೆ. ಇದರಿಂದ ಲಕ್ಷಾಂತರ ರೂ. ಮೌಲ್ಯದ ಬಟ್ಟೆ ನೀರುಪಾಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಕೆಲವು ಕಡೆ ಮಳೆಯಾಗುತ್ತಿದೆ.
ಅಂಗಡಿ ಮುಂಭಾಗ ಚರಂಡಿ ಕಾಮಗಾರಿ ಪ್ರಗತಿಯಲ್ಲಿದ್ದ ಕಾರಣ ನೀರು ಸಂಪೂರ್ಣ ಅಂಗಡಿ ಒಳಗೆ ನುಗ್ಗಿ ಎರಡ್ಮೂರು ಅಡಿ ಎತ್ತರಕ್ಕೆ ನೀರು ನಿಂತಿದೆ. ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಕಡೂರು ತಾಲೂಕಿನ ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.