ಚಿಕ್ಕಮಗಳೂರು:ಜಿಲ್ಲೆಯ ಕಳಸ, ಹೊರನಾಡು ಹಾಗೂ ಶೃಂಗೇರಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕಳಸದಿಂದ ಹೊರನಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆಬ್ಬಾಳೆ ಸೇತುವೆಯು ಮುಳುಗುವ ಹಂತಕ್ಕೆ ತಲುಪಿದೆ.
ಕಾಫಿನಾಡಲ್ಲಿ ಭಾರೀ ಮಳೆ... ಮುಳುಗುವ ಹಂತದಲ್ಲಿ ಹೆಬ್ಬಾಳೆ ಸೇತುವೆ - ಹೊರನಾಡು ಕ್ಷೇತ್ರ
ಕಾಫಿನಾಡು ಚಿಕ್ಕಮಗಳೂರಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಮಳೆಯಿಂದ ನೀರಿನ ಹರಿವು ಹೆಚ್ಚಾಗಿದ್ದು, ಹೆಬ್ಬಾಳೆ ಸೇತುವೆಯು ಸಂಪೂರ್ಣ ಜಲಾವೃತವಾಗುವ ಹಂತದಲ್ಲಿದೆ.
ಹೆಬ್ಬಾಳೆ ಸೇತುವೆ
ಒಂದು ವೇಳೆ ಹೆಬ್ಬಾಳೆ ಸೇತುವೆ ಮುಳುಗಿದರೆ ಕಳಸ ಮತ್ತು ಹೊರನಾಡು ಪ್ರಮುಖ ಸಂಪರ್ಕ ರಸ್ತೆ ಬಂದ್ ಆಗಲಿದೆ. ನಿರಂತರ ಮಳೆಯ ಕಾರಣ ಜಿಲ್ಲೆಯಲ್ಲಿನ ನದಿಗಳು ಮೈದುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನಲ್ಲಿ ಭಾರೀ ಏರಿಕೆ ಕಂಡು ಬರುತ್ತಿದೆ.
ಜಿಲ್ಲೆಯ ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ ಸೇರಿದಂತೆ ವಿವಿಧೆಡೆ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.