ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ - ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಧಾರಾಕಾರ ಮಳೆ
ಚಿಕ್ಕಮಗಳೂರು ನಗರ, ಮೂಡಿಗರೆ, ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಶೃಂಗೇರಿ, ಕಿಗ್ಗಾ, ಜಯಪುರ, ಬಾಳೆಹೊನ್ನೂರು, ಕೊಪ್ಪ, ಎನ್ಆರ್ ಪುರ ತಾಲೂಕಿನಲ್ಲಿ ನಿರಂತವಾಗಿ ಭಾರಿ ಮಳೆ ಬಿದ್ದಿದೆ.
ಧಾರಾಕಾರ ಮಳೆ
ನಿರಂತರ ಮಳೆ ಸುರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯ ಕಂಡು ಬರುತ್ತಿದೆ.