ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - chikkamagaluru news

ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಚಿಕ್ಕಮಗಳೂರಿನಲ್ಲಿ ಧಾರಕಾರ ಮಳೆ..ಜನಜೀವನ ಅಸ್ತವ್ಯಸ್ತ
ಚಿಕ್ಕಮಗಳೂರಿನಲ್ಲಿ ಧಾರಕಾರ ಮಳೆ..ಜನಜೀವನ ಅಸ್ತವ್ಯಸ್ತ

By

Published : Jun 10, 2020, 5:06 PM IST

ಚಿಕ್ಕಮಗಳೂರು:ರಾಜ್ಯಕ್ಕೆಮುಂಗಾರು ಪ್ರವೇಶವಾಗಿದ್ದು, ಜಿಲ್ಲಾದ್ಯಂತ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಎನ್.ಆರ್​.ಪುರ, ಶೃಂಗೇರಿಯಲ್ಲಿ ಇಂದು ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮಲೆನಾಡು ಭಾಗದಲ್ಲಿ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

ABOUT THE AUTHOR

...view details