ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಭದ್ರಾ ನದಿ ತುಂಬಿ ಹರಿಯುತ್ತಿದ್ದು, ಕಳಸದ ಬಳಿ ಇರುವ ಹೆಬ್ಬಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪುತ್ತಿದೆ.
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ; ಮುಳುಗುವ ಭೀತಿಯಲ್ಲಿ ಹೆಬ್ಬಾಳೆ ಸೇತುವೆ
ಸೇತುವೆ ಮುಳುಗಿದರೆ ಕಳಸ-ಹೊರನಾಡು ಸಂಪರ್ಕ ಕಡಿತವಾಗಲಿದೆ. ಕುದುರೆ ಮುಖ, ಶೃಂಗೇರಿ, ಕೊಪ್ಪ ಸುತ್ತಮುತ್ತ ಸುರಿಯುತ್ತಿರುವ ಮಳೆ ಆಗುತ್ತಿರುವ ಪರಿಣಾಮ ನದಿಗಳ ಹರಿವಿನ ಮಟ್ಟದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ..
ಮುಳುಗುವ ಭೀತಿಯಲ್ಲಿ ಹೆಬ್ಬಾಳೆ ಸೇತುವೆ
ಕೆಲ ದಿನಗಳ ಹಿಂದೆ ನಿರಂತರ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ನದಿಗಳು ತುಂಬಿ ಹರಿಯಲು ಪ್ರಾರಂಭ ಮಾಡಿವೆ. ನಿರಂತರ ಮಳೆ ಸುರಿಯುತ್ತಿರುವ ಕಾರಣ ಸೇತುವೆ ಮುಳುಗಡೆಗೆ ಕೆಲವೆ ಅಡಿ ಬಾಕಿ ಇದೆ. ಸೇತುವೆ ಮುಳುಗಿದರೆ ಕಳಸ-ಹೊರನಾಡು ಸಂಪರ್ಕ ಕಡಿತವಾಗಲಿದೆ. ಕುದುರೆ ಮುಖ, ಶೃಂಗೇರಿ, ಕೊಪ್ಪ ಸುತ್ತಮುತ್ತ ಸುರಿಯುತ್ತಿರುವ ಮಳೆ ಆಗುತ್ತಿರುವ ಪರಿಣಾಮ ನದಿಗಳ ಹರಿವಿನ ಮಟ್ಟದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.