ಚಿಕ್ಕಮಗಳೂರು: ನಗರದಲ್ಲಿ ಕಳೆದ ಗಂಟೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ - ಚಿಕ್ಕಮಗಳೂರು ಮಳೆ ನ್ಯೂಸ್
ಕಳೆದ 20 ದಿನಗಳಿಂದ ಚಿಕ್ಕಮಗಳೂರಲ್ಲಿ ಬಿಡುವು ನೀಡಿದ್ದ ಮಳೆ ಇಂದು ಬೆಳಗ್ಗೆಯಿಂದ ಧಾರಾಕಾರವಾಗಿ ಸುರಿಯಲು ಪ್ರಾರಂಭಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
Rain
ಕಳೆದ 20 ದಿನಗಳಿಂದ ನಗರದಲ್ಲಿ ವರುಣ ಬಿಡುವು ನೀಡಿದ್ದ. ಆದರೆ ಇಂದು ಬೆಳಗ್ಗೆಯಿಂದಲೇ ನಗರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಆಗಸ್ಟ್ ತಿಂಗಳ ಮೊದಲ ಎರಡು ವಾರ ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಧಿಕ ಮಳೆಯಾಗಿತ್ತು. ಇದೀಗ ದಿಢೀರ್ ಆರಂಭಗೊಂಡಿರುವ ಮಳೆಯನ್ನು ಕಂಡು ಜನರು ಕಂಗಾಲಾಗಿದ್ದಾರೆ.
ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ವಾಹನ ಸವಾರರು ಪರದಾಡುವಂತಾಗಿದೆ.