ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಗಾಳಿ-ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಎನ್.ಆರ್ ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಬಿರುಗಾಳಿ ಸಹಿತ ಮಳೆ ಆಗುತ್ತಿದೆ.
ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ: ಧರೆಗುರುಳಿದ ಮರಗಳು, ಜನಜೀವನ ಅಸ್ತವ್ಯಸ್ತ - Rain in chikkamagaluru
ಕಾಫಿನಾಡಿನಲ್ಲಿ ಗಾಳಿ ಸಹಿತ ಜೋರು ಮಳೆ ಸುರಿಯುತ್ತಿದ್ದು, ಮರಗಳು ಧರೆಗುರುಳಿವೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
![ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ: ಧರೆಗುರುಳಿದ ಮರಗಳು, ಜನಜೀವನ ಅಸ್ತವ್ಯಸ್ತ Heavy rain in Chikkamgaluru](https://etvbharatimages.akamaized.net/etvbharat/prod-images/768-512-7014350-425-7014350-1588324204906.jpg)
ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ
ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ತಾಲೂಕಿನ ಹಲವೆಡೆ ಭಾರಿ ಮಳೆ ಆಗುತ್ತಿದ್ದು, ಗಾಳಿ ಸಹಿತ ಮಳೆಗೆ ಕೊಟ್ಟಿಗೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ.
ಬಿಕ್ಕರಣೆ ಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಸಂಪೂರ್ಣ ಜಖಂ ಆಗಿದೆ. ಗ್ರಾಮದ ಪೂರ್ಣೇಶ್ ಎಂಬುವರಿಗೆ ಸೇರಿದ ಕೊಟ್ಟಿಗೆ ಸಂಪೂರ್ಣ ನಾಶವಾಗಿದೆ.