ಚಿಕ್ಕಮಗಳೂರು:ಜಿಲ್ಲೆಯಲ್ಲಿ ಮಳೆರಾಯ ಆರ್ಭಟಿಸಿ ನಿನ್ನೆ ರಾತ್ರಿಯಿಂದ ತಣ್ಣಗಾಗಿದ್ದ. ಆದರೆ, ಹಳ್ಳ ಕೊಳ್ಳಗಳು ಮಾತ್ರ ಇನ್ನೂ ತುಂಬಿ ಹರಿಯುತ್ತಿರುವುದರಿಂದ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ,ಕೆಲ ಗ್ರಾಮಗಳ ಸಂಪರ್ಕ ಕಡಿತ..!
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾಟಿಗನೆರೆ, ಬೇಗೂರು, ಸಿದ್ದಾಪುರ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯೋದಕ್ಕೆ ಪ್ರಾರಂಭಿಸಿದೆ. ರಸ್ತೆಯ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ
ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ಸೇತುವೆ ಮುಳುಗುವ ಹಂತ ತಲುಪಿದ್ದು, ಮಳೆ ನಿಂತರೂ ಅದು ಸೃಷ್ಟಿ ಮಾಡುತ್ತಿರುವ ಅವಾಂತರಗಳು ಮಾತ್ರ ಇನ್ನೂ ನಿಂತಿಲ್ಲ. ಮಳೆ ನೀರು ರಸ್ತೆಯ ಮೇಲೆ ತುಂಬಿ ಹರಿಯುತ್ತಿದ್ದು, ಗಡಿಹಳ್ಳಿ-ಅಣ್ಣಾಪುರ ರಸ್ತೆ ಸಂಪರ್ಕ ಬಂದ್ ಆಗಿದೆ. ಅಣ್ಣಾಪುರ, ಹೊಸೂರು, ನಂದಿಪುರ ಗ್ರಾಮಗಳ ಕೆರೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ಅಜ್ಜಂಪುರ ಭಾಗದಲ್ಲಿ ಈರುಳ್ಳಿ ಬೆಳೆ ಬಹುತೇಕ ನಾಶವಾಗಿದ್ದು, ಒಂದು ದಿನ ಸುರಿದ ಮಳೆಗೆ ಬಯಲು ಸೀಮೆಯ ಜನ ನಲುಗಿ ಹೋಗಿದ್ದಾರೆ.
TAGGED:
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ