ಕರ್ನಾಟಕ

karnataka

By

Published : Jun 16, 2021, 8:28 PM IST

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ.. ಗುಡ್ಡ ಕುಸಿತ, ಜನಜೀವನ ಅಸ್ತವ್ಯಸ್ತ

ಕಾಫಿನಾಡಿನಲ್ಲಿ ಮುಂಗಾರು ಮಳೆ ಆರಂಭದಲ್ಲೇ ಅಬ್ಬರಿಸುತ್ತಿದೆ. ಮೂಡಿಗೆರೆ ತಾಲೂಕಿನ ಬಿನ್ನಡಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಹೇಮಾವತಿ ನದಿ ತುಂಬಿ ಹರಿಯಲು ಪ್ರಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಮತ್ತು ಕೊಟ್ಟಿಗೆಹಾರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಭಾರಿ ಮಳೆ.
ಭಾರಿ ಮಳೆ.

ಚಿಕ್ಕಮಗಳೂರು :ವರುಣನ ಅಬ್ಬರಕ್ಕೆ ಜಿಲ್ಲೆಯ ಮಲೆನಾಡು ಭಾಗ ತತ್ತರಿಸಿ ಹೋಗಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಬಾಳೂರು, ಗಬಗಲ್, ಬೈರಾಪುರ, ಮಾಗುಂಡಿ, ಸುಂಕಸಾಲೆ, ಹಿರೇಬೈಲ್, ಸುತ್ತಾ ಮುತ್ತಾ ಬಾರಿ ಗಾಳಿ ಮಳೆ ಆಗುತ್ತಿದ್ದು ಈ ಭಾಗದಲ್ಲಿ ಎರಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ.

ಮೂಡಿಗೆರೆ ತಾಲೂಕಿನ ಬಿನ್ನಡಿಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಹೇಮಾವತಿ ನದಿ ಬೋರ್ಗರೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಮತ್ತು ಕೊಟ್ಟಿಗೆಹಾರಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ

ಜಿಲ್ಲೆಯ ಚಾರ್ಮಾಡಿ ಘಾಟ್​ನಲ್ಲಿ ರಸ್ತೆಗೆ ಮರ ಬಿದ್ದಿದ್ದು, ಸ್ಥಳಕ್ಕೆ ಬಣಕಲ್ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಜೆಸಿಬಿಯಿಂದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ABOUT THE AUTHOR

...view details