ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೇ ಧಾರಾಕಾರ ಮಳೆ ಮುಂದುವರೆದಿದೆ. ಈ ಮಧ್ಯೆ ಭಾರಿ ಮಳೆಗೆ ಮನೆಯೊಂದು ಕುಸಿದಿದ್ದು, ವೃದ್ದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿನ ನಿಂಗಮ್ಮ ಎಂಬುವರ ಮನೆ ಕುಸಿತವಾಗಿದೆ.
ಚಿಕ್ಕಮಗಳೂರಿನಲ್ಲಿ ಮಳೆಗೆ ಕುಸಿದ ಮನೆ: ವೃದ್ಧೆ ಪ್ರಾಣಾಪಾಯದಿಂದ ಪಾರು - ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಮನೆ ಕುಸಿದಿದೆ. ಘಟನೆಯಲ್ಲಿ ಸಾವಿರಾರು ಮೌಲ್ಯದ ವಸ್ತುಗಳು ನಾಶವಾಗಿವೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ಮನೆ
ಮನೆ ಕುಸಿಯುತ್ತಿರುವುದನ್ನು ಕಂಡು ತಕ್ಷಣ ಮನೆಯಿಂದ ಹೊರ ಓಡಿ ಬಂದು ಅಜ್ಜಿ ಜೀವ ಉಳಿಸಿಕೊಂಡಿದ್ದಾರೆ. ಘಟನೆಯಲ್ಲಿ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ.
ಓದಿ:ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆರೋಪಗಳು ಸತ್ಯಕ್ಕೆ ದೂರ : ಸರ್ಕಾರದ ಸ್ಪಷ್ಟನೆ