ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಇಡೀ ದಿನ ನಿಲ್ಲದ ಮಳೆ - Kn_Ckm_07_Rain_av_7202347

ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ, ಕುದುರೆಮುಖದಲ್ಲಿ ಭಾರೀ ಮಳೆಯಾಗುತ್ತಿದೆ. ನಗರ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ವಾಹನ ಸಂಚಾರದಲ್ಲಿಯೂ ಅಡಚಣೆ ಉಂಟಾಗಿದ್ದು, ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಜಿಲ್ಲೆಯಲ್ಲಿ ಮುಂಜಾನೆಯಿಂದಲೂ ಎಡಬಿಬಿಡದೆ ಸುರಿಯುತ್ತಿರುವ ಮಳೆ

By

Published : Jul 9, 2019, 9:03 PM IST

ಚಿಕ್ಕಮಗಳೂರು: ನಗರದಲ್ಲಿ ಇಂದು ಮುಂಜಾನೆಯಿಂದಲೂ ಮಳೆ ಸುರಿಯುತ್ತಿದೆ. ಜೊತೆಗೆ ಮಲೆನಾಡು ಭಾಗ ಹಾಗೂ ಪಶ್ಚಿಮ ಘಟ್ಟ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರು ನಗರ ಪ್ರದೇಶ ಸೇರಿದಂತೆ ಶೃಂಗೇರಿ, ಕೊಪ್ಪ, ಮೂಡಿಗೆರೆ, ಕಳಸ, ಕುದುರೆಮುಖದಲ್ಲಿ ಭಾರೀ ಮಳೆಯಾಗುತ್ತಿದೆ. ನಗರ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ವಾಹನ ಸಂಚಾರದಲ್ಲಿಯೂ ಅಡಚಣೆ ಉಂಟಾಗಿದ್ದು, ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮಲೆನಾಡಿನ ಕೆಲ ಗ್ರಾಮದಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಜಿಲ್ಲೆಯಲ್ಲಿ ಮುಂಜಾನೆಯಿಂದಲೂ ಸುರಿಯುತ್ತಿರುವ ಮಳೆ

ನಿರಂತರ ಮಳೆಯ ಕಾರಣ ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

For All Latest Updates

ABOUT THE AUTHOR

...view details