ಚಿಕ್ಕಮಗಳೂರು:ಚಿಕ್ಕಮಗಳೂರಿನಲ್ಲಿ ಮಳೆಯ ಅಬ್ಬರ ಇಂದು ಕೂಡ ಜೋರಾಗಿದ್ದು, ನಿರಂತರ ಮಳೆ ಗಾಳಿಗೆ ಬೃಹತ್ ಗಾತ್ರದ ಮರಗಳು ನೆಲಕ್ಕೆ ಉರಳಿ ಬೀಳುತ್ತಿವೆ.
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲೂಕಿನ ಬಾಳೆಹೊನ್ನೂರಿನ ಇಟ್ಟಿಗೆ ಶಿವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದ ರಭಸಕ್ಕೆ ಶೆಡ್, ವಿದ್ಯುತ್ ಕಂಬಗಳು ಸಂಪೂರ್ಣ ಹಾನಿಯಾಗಿವೆ.
ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಕೆಲ ದಿನಗಳ ಹಿಂದೆ ಈ ಮರ ತೆರವಿಗೆ ಸ್ಥಳೀಯರು ಅರ್ಜಿ ಸಲ್ಲಿಸಿದ್ದರು. ಇನ್ನೊಂದು ಕಡೆ ಕೊಪ್ಪ ತಾಲೂಕಿನಲ್ಲಿಯೂ ಮಳೆ ಮುಂದುವರೆದಿದ್ದು, ನಿರಂತರ ಮಳೆಗೆ ವಿದ್ಯುತ್ ಕಂಬಗಳು ಧರೆಗೆ ಉರುಳುತ್ತಿದ್ದು, ರಸ್ತೆ ಸಂಪರ್ಕ ಖಡಿತವಾಗಿದೆ.
ಮರದ ರೆಂಬೆಗಳಡಿ ಬೈಕ್ಗಳು ಸಿಲುಕಿದ್ದು, ಕೆಲ ಕಡೆ ಮರ ಬಿದ್ದು, ಮನೆಗಳ ಛಾವಣಿ ಜಖಂ ಆಗಿದೆ. ಜಿಲ್ಲೆಯಲ್ಲಿ ಮೂವತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕದಲ್ಲಿ ಕಡಿತ ಉಂಟಾಗಿದೆ.