ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ, ಜನ ಜೀವನ ಅಸ್ತವ್ಯಸ್ತ - ಕಾಫಿ ನಾಡು ಚಿಕ್ಕಮಗಳೂರು
ಮೂಡಿಗೆರೆ, ಕುದುರೆಮುಖ, ಶೃಂಗೇರಿ, ಕೊಪ್ಪ, ಬಣಕಲ್, ಕೊಟ್ಟಿಗೆಹಾರ, ಎನ್ಆರ್‌ಪುರ, ಕಳಸ-ಹೊರನಾಡು ಹಾಗೂ ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದೆ. ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ..
ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟ
ಮೂಡಿಗೆರೆ, ಕುದುರೆಮುಖ, ಶೃಂಗೇರಿ, ಕೊಪ್ಪ, ಬಣಕಲ್, ಕೊಟ್ಟಿಗೆಹಾರ, ಎನ್ಆರ್‌ಪುರ, ಕಳಸ-ಹೊರನಾಡು ಹಾಗೂ ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದೆ. ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಸಂಚಾರದಲ್ಲಿ ಅಡಚಣೆ ಉಂಟಾಗಿದೆ.
ಭಾರಿ ಮಳೆ ಹಿನ್ನೆಲೆ ಮಲೆನಾಡಿನ ಕೆಲ ಭಾಗದಲ್ಲಿ ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ನೆಲಕಚ್ಚಿವೆ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿರುವ ನದಿಗಳ ಹರಿವಿನ ಮಟ್ಟದಲ್ಲಿ ಹೆಚ್ಚಳವಾಗಿದೆ.