ಕರ್ನಾಟಕ

karnataka

ETV Bharat / state

ಜನರ ಕಣ್ಣೆದುರೇ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ.. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಣ ಮಳೆಗೆ ಮೂರನೇ ಬಲಿ - ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟ- ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ - ಮಹಾಮಳೆಗೆ ಮತ್ತೊಂದು ಜೀವ ಬಲಿ

ಚಿಕ್ಕಮಗಳೂರು
ಚಿಕ್ಕಮಗಳೂರು

By

Published : Jul 12, 2022, 6:53 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗ ಸೇರಿದಂತೆ ಬಯಲು ಸೀಮೆ ಭಾಗದಲ್ಲಿಯೂ ಧಾರಾಕಾರ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಒಂದೆಡೆ ನಾನಾ ಅವಾಂತರಗಳು ಸೃಷ್ಟಿಯಾದರೆ, ಇನ್ನೊಂದೆಡೆ ಜನರ ಜೀವವು ಹಾರಿ ಹೋಗುತ್ತಿದೆ.

ಚಿಕ್ಕಮಗಳೂರಿನಲ್ಲಿ ರಣಮಹಾಮಳೆ

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಗೆ ಮೂರನೇ ಜೀವ ಬಲಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಬಾಲಕಿ ಒಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿದ್ದು, ಮೃತದೇಹ ಇನ್ನೂ ಸಿಕ್ಕಿಲ್ಲ. ಬಾಲಕಿಯ ಮೃತದೇಹ ಹುಡುಕುವ ಶೋಧ ಕಾರ್ಯ ಮುಂದುವರೆದಿದೆ.

ಕಳಸದಲ್ಲಿಯೂ ಕಳೆದ ಎರಡು ದಿನಗಳ ಹಿಂದೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ 20 ವರ್ಷದ ಯುವತಿ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಳು. ಅದರ ಬೆನ್ನಲ್ಲೇ ಚಿಕ್ಕಮಗಳೂರು ನಗರದ ಹೊರ ವಲಯದ ಉಂಡೆ ದಾಸರಹಳ್ಳಿಯಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳದಲ್ಲಿ ಸುಮಾರು 40 ವರ್ಷದ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಜನರ ಕಣ್ಣೆದುರಿಗೆ ಈ ವ್ಯಕ್ತಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಚಿಂದಿ ಆಯಲು ಹೋಗುವ ವೇಳೆ ಈ ದುರಂತ ಸಂಭವಿಸಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನಗರಸಭೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಹುಡುಕಾಟ ನಡೆಸುತ್ತಿದ್ದಾರೆ. ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಈ ಮಹಾ ಮಳೆಗೆ ಮೂರನೇ ಬಲಿ ಆದಂತಾಗಿದೆ.

ಓದಿ:52 ನಿಗಮ ಮಂಡಳಿ ಅಧ್ಯಕ್ಷರ ನಾಮ ನಿರ್ದೇಶನ ರದ್ದು: ಬಿಎಸ್​ವೈ, ವಿಜಯೇಂದ್ರ ಆಪ್ತರಿಗೆ ಶಾಕ್​

ABOUT THE AUTHOR

...view details