ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ - Rain in malnad

ಕೊರೊನಾ ಭೀತಿಯಿಂದ ದೂರಾಗಿ ಗ್ರೀನ್ ಝೋನ್​​​ನಲ್ಲಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಜಿಲ್ಲೆಯ ಹಲವು ತಾಲೂಕುಗಳಲ್ಲಿ ಈವರೆಗೆ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.

Heavy rainfall at part of Chikkamagaluru: agricultural activities got life
ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ

By

Published : May 2, 2020, 9:25 PM IST

ಚಿಕ್ಕಮಗಳೂರು:ಕೊರೊನಾ ವೈರಸ್ ಭೀತಿ ಹಾಗೂ ಲಾಕ್​​ಡೌನ್ ನಡುವೆ ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ದಿನಗಳಿಂದ ಧಾರಾಕಾರ ಮಳೆ ಸುರಿಯಲು ಪ್ರಾರಂಭ ಆಗಿದೆ. ಇಂದು ಸಂಜೆಯಿಂದಲೂ ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ನಗರದಲ್ಲಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತ ಉಂಟಾಗಿತ್ತು.

ಇನ್ನು ಜಿಲ್ಲೆಯ ಬಾಳೆಹೊನ್ನೂರು, ಕಳಸ, ಶೃಂಗೇರಿ, ಕೊಪ್ಪ, ಶೃಂಗೇರಿ ಸೇರಿದಂತೆ ಬಯಲುಸೀಮೆ ತಾಲೂಕಿನ ಕೆಲ ಭಾಗದ ಸುತ್ತಮುತ್ತ ಮಳೆಯಾಗಿದೆ. ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭೂಮಿಗೆ ತಂಪಾಗಿದ್ದು, ಗುಡುಗು-ಸಿಡಿಲಿನೊಂದಿಗೆ ಇಂದು ವರುಣನ ಆಗಮನವಾಗಿದೆ.

ಕಳೆದ ಹಲವಾರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನರು ಹಾಗೂ ರೈತರು ಸಂತಸಗೊಂಡಿದ್ದಾರೆ. ಇದರ ಮಧ್ಯೆ ನಗರದ ಹಲವಾರು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನರು ಕತ್ತಲಲ್ಲಿ ಕಾಲ ಕಳೆಯುವಂತಾಯಿತು.

ABOUT THE AUTHOR

...view details