ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಲವಾರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮತ್ತೆ ಅವಾಂತರಗಳು ಸೃಷ್ಟಿಯಾಗುತ್ತಿವೆ. ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕುಸಿತ ಉಂಟಾಗಿದೆ.
ಕಾಫಿನಾಡಲ್ಲಿ ವರುಣನಾರ್ಭಟ: ಜನಜೀವನ ಅಸ್ತವ್ಯಸ್ತ - rain in chikmagaluru
ಚಿಕ್ಕಮಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆ ಬದಿಯ ಮರಗಳು ಧರೆಗುರುಳಿವೆ.
ಆಲ್ದೂರು, ಬಾಳೆಹೊನ್ನೂರಿನಲ್ಲಿ ಭಾರಿ ವಾಹನಗಳ ಓಡಾಟಕ್ಕೆ ತಡೆಯೊಡ್ಡಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಹಾಗೂ ಕೊಟ್ಟಿಗೆಹಾರದ ಸುತ್ತಮುತ್ತ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿರುಗಾಳಿ, ಗುಡುಗು-ಸಿಡಿಲಿನೊಂದಿಗೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆ ಬದಿಯ ಮರಗಳು ಧರೆಗುರುಳಿವೆ.
ಮೂಡಿಗೆರೆ ಬಾಳೂರು, ಮತ್ತಿಕಟ್ಟೆ, ಹೊಸಳ್ಳಿ ಹಾಗೂ ಬಣಕಲ್ ಸುತ್ತಮುತ್ತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲೇ ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಕೊಂಬೆಗಳು ಬಿದ್ದಿರೋದ್ರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.