ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ.. ಜನಜೀವನ ಅಸ್ತವ್ಯಸ್ತ - ಈಟಿವಿ ಭಾರತ್ ಕನ್ನಡ ಸುದ್ದಿ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಸೇತುವೆ ಮುಳುಗಡೆಯಾಗಿದೆ.

ಮನೆ ಕಟ್ಟಡ ಕುಸಿತ
ಮನೆ ಕಟ್ಟಡ ಕುಸಿತ

By

Published : Aug 9, 2022, 5:06 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರೆದಿದ್ದು, ಮನೆ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಲಿಯಮ್ಮ-ಬಾಬು ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದೆ.

ಸೇತುವೆ ಮುಳುಗಡೆ: ಭಾರಿ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಜೀವನ ನಡೆಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದು ಭಾಗದಲ್ಲಿ ಧಾರಾಕಾರ ಮಳೆಗೆ ಶಾಲಾ ಕಟ್ಟಡ ಕುಸಿದುಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭಾರಿ ಮಳೆಯಿಂದ ಬೈದುವಳ್ಳಿ ಸೇತುವೆ ಮುಳುಗಡೆಯಾಗಿದೆ.

ಧಾರಾಕಾರ ಮಳೆಗೆ ಮನೆ ಕಟ್ಟಡ ಕುಸಿತವಾಗಿರುವುದು

ಜನಜೀವನ ಅಸ್ತವ್ಯಸ್ತ: ಒಂದೆಡೆಯಿಂದ ಮತ್ತೊಂದೆಡೆಗೆ ತೆರಳಲು ಜನ ಸಾಮಾನ್ಯರ ಪರದಾಟ ಸಹಜವಾಗಿದೆ. ಬಿರುಗಾಳಿ ಸಹಿತ ಮಳೆಗೆ ಜನರು ತತ್ತರಿಸುವಂತಾಗಿದೆ. ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆ ಕುಸಿದು ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವನಜಾಕ್ಷಮ್ಮ ಎಂಬುವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಕುಟುಂಬ ಕಂಗಾಲಾಗಿದ್ದು, ಈ ಭಾಗದಲ್ಲಿಯೂ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಓದಿ:ಇದಾವ ನ್ಯಾಯ?: 3 ವರ್ಷದಲ್ಲಾದ ನೆರೆ ಹಾನಿ ₹78,395 ಕೋಟಿ; ಕೊಟ್ಟ ಪರಿಹಾರ ಕೇವಲ ₹10,826 ಕೋಟಿ!

ABOUT THE AUTHOR

...view details